2 Samuel 11:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
Kannada BSI Bible 2016
ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು.
Kannada Bible (KNCL) BSI 2016
ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.