2 Samuel 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು. ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
Kannada BSI Bible 2016
ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ - ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು.
Kannada Bible (KNCL) BSI 2016
ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು,” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.