2 Samuel 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
Kannada BSI Bible 2016
ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಗೆ ಹೋಗಿ ಕೈಕಾಲು ತೊಳೆದುಕೋ ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.
Kannada Bible (KNCL) BSI 2016
ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.