2 Samuel 12:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
Kannada BSI Bible 2016
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.
Kannada Bible (KNCL) BSI 2016
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.