2 Samuel 12:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
Kannada BSI Bible 2016
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;
Kannada Bible (KNCL) BSI 2016
ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.