2 Samuel 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
Kannada BSI Bible 2016
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು
Kannada Bible (KNCL) BSI 2016
ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.