2 Samuel 12:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
Kannada BSI Bible 2016
ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.
Kannada Bible (KNCL) BSI 2016
ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.