2 Samuel 12:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ಈ ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ; ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವದು ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.