2 Samuel 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
Kannada BSI Bible 2016
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.
Kannada Bible (KNCL) BSI 2016
ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;