2 Samuel 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮ್ನೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು. ತಾಮಾರಳು ತನ್ನ ಸೋದರನಾದ ಅಮ್ನೋನನಿದ್ದ ಒಳಕೋಣೆಗೆ ಹೋದಳು. ಅವಳು ತಾನು ಮಾಡಿದ ರೊಟ್ಟಿಗಳನ್ನು ತಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.
Kannada BSI Bible 2016
ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ - ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡುಹೋಗಿ ಅವನ ಮುಂದಿಟ್ಟಳು.
Kannada Bible (KNCL) BSI 2016
ಎಲ್ಲರೂ ಹೋದಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ, ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ!” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು.