2 Samuel 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಅಮ್ನೋನನು ತಾಮಾರಳನ್ನು ದ್ವೇಷಿಸಿದನು. ಅಮ್ನೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕಿಂತ ಹೆಚ್ಚಾಗಿ ದ್ವೇಷಿಸಿದನು. ಅಮ್ನೋನನು ತಾಮಾರಳಿಗೆ, “ಮೇಲೇಳು, ಹೊರಟುಹೋಗು!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
Kannada BSI Bible 2016
ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.
Kannada Bible (KNCL) BSI 2016
ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷ ಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು.