2 Samuel 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ನೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದ ನಂತರ ಬಾಗಿಲಿಗೆ ಬೀಗವನ್ನು ಹಾಕಿದನು. ತಾಮಾರಳು ನಾನಾ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ರಾಜನ ಹೆಣ್ಣುಮಕ್ಕಳು ಕನ್ಯೆಯರಾಗಿದ್ದಾಗ ಇಂತಹ ನಿಲುವಂಗಿಗಳನ್ನು ಧರಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.
Kannada BSI Bible 2016
ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಆಕೆಯು ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.
Kannada Bible (KNCL) BSI 2016
(ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.