2 Samuel 13:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಈ ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ನೋನನು ಬಲಹೀನನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.
Kannada BSI Bible 2016
ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಯ ಮೇಲಣ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆಯು ಕನ್ಯೆಯಾಗಿದ್ದದರಿಂದ ಆಕೆಗೆ ಏನು ಮಾಡುವದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.
Kannada Bible (KNCL) BSI 2016
ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.