2 Samuel 13:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
Kannada BSI Bible 2016
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.
Kannada Bible (KNCL) BSI 2016
ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.