2 Samuel 13:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ಷಾಲೋಮನು ರಾಜನ ಬಳಿಗೆ ಹೋಗಿ, “ನನ್ನ ಕುರಿಗಳ ತುಪ್ಪಟವನ್ನು ಕತ್ತರಿಸಲು ಕೆಲವು ಜನರು ಬರುತ್ತಾರೆ. ದಯವಿಟ್ಟು ನೀವು ನಿಮ್ಮ ಸೇವಕರೊಂದಿಗೆ ಬಂದು ಅದನ್ನು ಗಮನಿಸಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.
Kannada BSI Bible 2016
ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಸನ ಬಳಿಗೂ ಹೋಗಿ ಅವನನ್ನು - ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರಿಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಚಿತ್ತಯಿಸೋಣವಾಗಲಿ ಎಂದು ಬೇಡಿಕೊಂಡನು.
Kannada Bible (KNCL) BSI 2016
ಅವನು ಅರಸನ ಬಳಿಗೂ ಹೋಗಿ, “ಅರಸರೇ, ತಮ್ಮ ಸೇವಕನಾದ ನಾನು ಕುರಿಗಳ ಉಣ್ಣೆಕತ್ತರಿಸುವವರನ್ನು ಕರೆಸಿದ್ದೇನೆ. ಅರಸನು ತಮ್ಮ ಸೇವಕರ ಸಮೇತ ಅಲ್ಲಿಗೆ ಚಿತ್ತೈಸೋಣವಾಗಲಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.