2 Samuel 13:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
Kannada BSI Bible 2016
ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅವನಿಗೆ - ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ, ಅವನನ್ನು ಆಶೀರ್ವದಿಸಿದನು, ಅಷ್ಟೆ.
Kannada Bible (KNCL) BSI 2016
ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.