2 Samuel 13:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.
Kannada BSI Bible 2016
ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು.
Kannada Bible (KNCL) BSI 2016
ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.