2 Samuel 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದ್ವಾನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಯೋಜನೆವಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.
Kannada BSI Bible 2016
ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.
Kannada Bible (KNCL) BSI 2016
ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.