2 Samuel 13:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ಷಾಲೋಮನು ಓಡಿಹೋದನು. ಆ ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.
Kannada BSI Bible 2016
ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಅಬ್ಷಾಲೋಮನು ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವದನ್ನು ಕಂಡನು.
Kannada Bible (KNCL) BSI 2016
(ಅಬ್ಷಾಲೋಮನು ತಲೆ ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದುಬರುವುದನ್ನು ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.