2 Samuel 13:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
Kannada BSI Bible 2016
ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.
Kannada Bible (KNCL) BSI 2016
ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.