2 Samuel 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.
Kannada BSI Bible 2016
ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ - ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು ಎಂದು ಹೇಳಿಸಿದನು.
Kannada Bible (KNCL) BSI 2016
ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣ ಅಮ್ನೋನನ ಮನೆಗೆ ಹೋಗಿ ಅವನಿಗಾಗಿ ಆಹಾರವನ್ನು ಸಿದ್ಧಮಾಡು,” ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು.