2 Samuel 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
Kannada BSI Bible 2016
ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆಕೆ ಅವುಗಳನ್ನು ಬಾಂಡ್ಲದಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟ ಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
Kannada Bible (KNCL) BSI 2016
ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು.