2 Samuel 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.
Kannada BSI Bible 2016
ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಆಕೆಗೆ - ಹಾಗೆ ಅಂದವರನ್ನು ನನ್ನ ಬಳಿಗೆ ಕರಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ ಅಂದನು.
Kannada Bible (KNCL) BSI 2016
ಅರಸ ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.