2 Samuel 14:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ನನ್ನ ಒಡೆಯನೇ, ನಾನು ಈ ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು. ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
Kannada BSI Bible 2016
ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಿರಲಿ, ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ ಅವನು ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಾನು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವದಕ್ಕೆ ಬಂದೆನು.
Kannada Bible (KNCL) BSI 2016
ಅದಿರಲಿ, ತಮ್ಮ ಸೇವಕಿ ಆದ ನನ್ನನ್ನು ಜನರು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸರಿಗೆ ತಿಳಿಸಿದರೆ ಅವರು ತಮ್ಮ ಸೇವಕಿಯ ಬಿನ್ನಹವನ್ನು ಆಲಿಸಾರು ಎಂದುಕೊಂಡು ನನ್ನ ಒಡೆಯರಾದ ಅರಸರಿಗೆ ಇದನ್ನು ತಿಳಿಸುವುದಕ್ಕೆ ಬಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.