2 Samuel 14:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ತ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
Kannada BSI Bible 2016
ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.
Kannada Bible (KNCL) BSI 2016
ಅರಸರು ತಮ್ಮ ಸೇವಕಿಯಾದ ನನ್ನ ಬಿನ್ನಹವನ್ನು ಆಲಿಸಿ, ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದು ಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ, ತಪ್ಪಿಸಿ ರಕ್ಷಿಸುವಿರೆಂದು ನಂಬಿಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.