2 Samuel 14:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
Kannada BSI Bible 2016
ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.
Kannada Bible (KNCL) BSI 2016
ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು,” ಎಂದು ಹೇಳಿದನು. ಆಕೆ, “ಅರಸರ ಅಪ್ಪಣೆಯಾಗಲಿ,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.