2 Samuel 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀನು ಹೇಳಿದ್ದು ಸರಿ!” ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
Kannada BSI Bible 2016
ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
Kannada Bible (KNCL) BSI 2016
ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.