2 Samuel 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
Kannada BSI Bible 2016
ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು
Kannada Bible (KNCL) BSI 2016
ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,