2 Samuel 14:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
Kannada BSI Bible 2016
ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅರಸನು - ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು; ಅರಸನ ಮುಖವನ್ನು ನೋಡಲಿಲ್ಲ.
Kannada Bible (KNCL) BSI 2016
ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು,” ಎಂದು ಆಜ್ಞಾಪಿಸಿದನು. ಆದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.