2 Samuel 14:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಅಬ್ಷಾಲೋಮನನ್ನು, ಅವನ ಸುಂದರ ರೂಪಕ್ಕಾಗಿ ಬಹಳ ಹೊಗಳುತ್ತಿದ್ದರು. ಇಸ್ರೇಲಿನಲ್ಲಿ ಅವನಷ್ಟು ರೂಪವಂತನು ಬೇರೆ ಯಾರೂ ಇರಲಿಲ್ಲ. ಅಬ್ಷಾಲೋಮನ ತಲೆಯಿಂದ ಪಾದಗಳವರೆಗೆ ಯಾವ ಕಳಂಕವೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
Kannada BSI Bible 2016
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲ್ಯರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.
Kannada Bible (KNCL) BSI 2016
ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.