2 Samuel 14:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಬ್ಷಾಲೋಮನು ಯೋವಾಬನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಅಬ್ಷಾಲೋಮನನ್ನು ರಾಜನ ಹತ್ತಿರಕ್ಕೆ ಕಳುಹಿಸಿ ಕೊಡುವಂತೆ ಈ ಸಂದೇಶಕರು ಯೋವಾಬನನ್ನು ಕೇಳಿದರು. ಆದರೆ ಯೋವಾಬನು ಅಬ್ಷಾಲೋಮನ ಬಳಿಗೆ ಬರಲಿಲ್ಲ. ಅಬ್ಷಾಲೋಮನು ಎರಡನೆಯ ಬಾರಿ ಸಂದೇಶವನ್ನು ಕಳುಹಿಸಿದನು. ಆದರೂ ಯೋವಾಬನು ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
Kannada BSI Bible 2016
ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಅವನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು; ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
Kannada Bible (KNCL) BSI 2016
ಅನಂತರ ಒಂದು ದಿನ ಅವನು, ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಬರಮಾಡಲೆತ್ನಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.