2 Samuel 14:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Kannada BSI Bible 2016
ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ - ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಹೊಲವುಂಟಲ್ಲಾ; ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ ಎಂದು ಆಜ್ಞಾಪಿಸಿದನು; ಅವರು ಹಾಗೆಯೇ ಮಾಡಿದರು.
Kannada Bible (KNCL) BSI 2016
ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿ, ಸಮೀಪದಲ್ಲೇ ಯೋವಾಬನ ಜವೆಗೋದಿಹೊಲವುಂಟಲ್ಲವೇ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ,” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.