2 Samuel 14:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
Kannada BSI Bible 2016
ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು - ಅರಸೇ, ರಕ್ಷಿಸು ಎಂದು ಕೂಗಿದಳು.
Kannada Bible (KNCL) BSI 2016
ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.