2 Samuel 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ.್ಲ ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
Kannada BSI Bible 2016
ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
Kannada Bible (KNCL) BSI 2016
ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.