2 Samuel 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
Kannada BSI Bible 2016
ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.
Kannada Bible (KNCL) BSI 2016
ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.