2 Samuel 14:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.
Kannada BSI Bible 2016
ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು.
Kannada Bible (KNCL) BSI 2016
ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.