2 Samuel 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
Kannada BSI Bible 2016
ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನೂ ಕುದುರೆಗಳನ್ನೂ ತೆಗೆದುಕೊಂಡು ತನ್ನ ಮುಂದೆ ಮೈಗಾವಲಾಗಿ ಓಡುವದಕ್ಕೆ ಐವತ್ತು ಮಂದಿಯನ್ನು ನೇವಿುಸಿದನು.
Kannada Bible (KNCL) BSI 2016
ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.