2 Samuel 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
Kannada BSI Bible 2016
ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲ್ಯರ ಎಲ್ಲಾ ಕುಲದವರಿಗೆ - ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೆ ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಆರ್ಭಟಿಸಿರಿ ಎಂದು ಹೇಳಿಸಿದ್ದನು.
Kannada Bible (KNCL) BSI 2016
ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.