2 Samuel 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
Kannada BSI Bible 2016
ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ.
Kannada Bible (KNCL) BSI 2016
ಅಬ್ಷಾಲೋಮನು ಜೆರುಸಲೇಮಿನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥಮನಸ್ಸಿನಿಂದ ಹೋದವರು; ಒಳಸಂಚಿನ ಸುಳಿವೇನೂ ಅವರಿಗೆ ಗೊತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.