2 Samuel 15:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
Kannada BSI Bible 2016
ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಮನೆಕಾಯುವದಕ್ಕಾಗಿ ಹತ್ತು ಮಂದಿ ಉಪ ಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರಕೊಂಡು ಹೊರಟನು.
Kannada Bible (KNCL) BSI 2016
ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.