2 Samuel 15:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
Kannada BSI Bible 2016
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ - ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನ ಬಳಿಯಲ್ಲಿ ವಾಸಮಾಡು.
Kannada Bible (KNCL) BSI 2016
ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ, “ನೀನು ನಮ್ಮ ಸಂಗಡ ಏಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ? ಹಿಂದಿರುಗಿ ಹೋಗಿ ಅರಸನ ಬಳಿಯಲ್ಲೇ ವಾಸಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.