2 Samuel 15:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
Kannada BSI Bible 2016
ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.
Kannada Bible (KNCL) BSI 2016
ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.