2 Samuel 15:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
Kannada BSI Bible 2016
ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಣವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್‍ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.
Kannada Bible (KNCL) BSI 2016
ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.