2 Samuel 15:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
Kannada BSI Bible 2016
ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.
Kannada Bible (KNCL) BSI 2016
ಚಾದೋಕನೂ ಅವನ ವಶದಲ್ಲಿದ್ದ ಲೇವಿಯರೆಲ್ಲರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು, ಅದನ್ನು ಜನರೆಲ್ಲರು ದಾಟಿ ಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.