2 Samuel 15:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
Kannada BSI Bible 2016
ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.
Kannada Bible (KNCL) BSI 2016
ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.