2 Samuel 15:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
Kannada BSI Bible 2016
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.
Kannada Bible (KNCL) BSI 2016
ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.