2 Samuel 15:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
Kannada BSI Bible 2016
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.
Kannada Bible (KNCL) BSI 2016
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.