2 Samuel 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
Kannada BSI Bible 2016
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಅರಸನ ಬಳಿಗೆ ಬಂದನು.
Kannada Bible (KNCL) BSI 2016
ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.