2 Samuel 15:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
Kannada BSI Bible 2016
ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ - ಅರಸನೇ, ನಾನು ನಿನ್ನ ಸೇವಕನು; ಮುಂಚೆ ನಿನ್ನ ತಂದೆಯನ್ನು ಸೇವಿಸಿದಂತೆ ಈಗ ನಿನ್ನನ್ನು ಸೇವಿಸುತ್ತೇನೆ ಎಂದು ಹೇಳುವದಾದರೆ ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ನಿನಗೆ ಅನುಕೂಲವಾಗುವದು.
Kannada Bible (KNCL) BSI 2016
ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು.