2 Samuel 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
Kannada BSI Bible 2016
ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೇವಕನಾದ ನಾನು ಅರಾಮ್‍ದೇಶದ ಗೆಷೂರಿನಲ್ಲಿದ್ದಾಗ - ಯೆಹೋವನು ನನ್ನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡುವದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೆನು ಎಂದು ವಿಜ್ಞಾಪಿಸಲು
Kannada Bible (KNCL) BSI 2016
ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.